ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನರೇ ಮೋದಿಜಿ ಅವರ ಅಕ್ಕಿ ಮಾತ್ರ ನಿಮಗೆ ಗ್ಯಾರೆಂಟಿ, ಸಿದ್ದರಾಮಯ್ಯ ಸರ್ಕಾರವನ್ನು ನಂಬಿದ್ರೆ ನಿಮಗೆ ಮೋಸ ಬಿಟ್ರೆ ಇನ್ನೇನು ಸಿಗೋದಿಲ್ಲ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಅಕ್ಕಿ ವಿಚಾರದಲ್ಲಿ ಸುಳ್ಳುಗಳನ್ನೇ ಹೇಳುತ್ತಿದ್ದಾರೆ. ಗ್ಯಾರಂಟಿಗಳನ್ನು ಕಂಡಿಷನ್ ಮೇಲೆ ಜಾರಿ ಮಾಡುತ್ತಿದ್ದಾರೆ. ಕಾಂಗ್ರೆಸ್ನದು ಮಾತು ತಪ್ಪಿದ, ಮೋಸ ಮಾಡುವ ಸರಕಾರ. ಅಕ್ಕಿ ಕೊಡುವುದನ್ನು ಮುಂದೂಡಲು ಮೋದಿಯವರ ಹೆಸರನ್ನು ತರುತ್ತಿದ್ದಾರೆ ಎಂದು ಆರೋಪಿಸಿದರು.
ನೀವು ಪ್ರತಿಭಟನೆಗೆ ಬರ್ತಾ ಇದ್ದೀರಂದ್ರೆ ನೀವು ಕೆಲಸ ಮಾಡಲು ನಾಲಾಯಕ್, ಕೆಲಸಕ್ಕೆ ಬಾರದವರು ಎಂದರ್ಥ, ಇದನ್ನು ನಾನು ಹೇಳಿಲ್ಲ, ನಿಮ್ಮದೇ ಪಕ್ಷದ ಡಿ.ಕೆ. ಸುರೇಶ್ ಅವರು ಹೇಳಿದ್ದಾರೆ ಎಂದು ನೆನಪಿಸಿದರು.
ಶಾಸಕರಾದ ಮುನಿರಾಜು, ಎಂ.ಕೃಷ್ಣಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಎನ್ ರವಿಕುಮಾರ್, ವಿಧಾನ ಪರಿಷತ್ತಿನ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಜಿಲ್ಲಾಧ್ಯಕ್ಷರಾದ ಮಂಜುನಾಥ್, ನಾರಾಯಣಗೌಡ ಮತ್ತಿತರ ಪ್ರಮುಖರು, ಕಾರ್ಯಕರ್ತರು ಈ ಸಂದರ್ಭದಲ್ಲಿ ಇದ್ದರು.