ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತದಾನ ಬಹಿಷ್ಕಾರ ಮಾಡಿರುವ ಗ್ರಾಮದ ಸಾಲಿಗೆ ದೋನಹಳ್ಳಿ ಗ್ರಾಮಸ್ಥರು ಕೂಡ ಸೇರ್ಪಡೆಯಾಗಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೋನಹಳ್ಳಿ ಗ್ರಾಮಕ್ಕೆ ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ಗ್ರಾಮದಲ್ಲಿರುವ 120 ಮತದಾರರು ಮತದಾನ ಬಹಿಷ್ಕರಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಬಂದ ಚುನಾವಣಾಧಿಕಾರಿಗಳು ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ ಸಫಲವಾಗದೆ, ಅಧಿಕಾರಿಗಳನ್ನೇ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ತಮ್ಮ ಸಮಸ್ಯೆಯನ್ನು ಈಗಾಗಲೇ ನೂರಾರು ಬಾರಿ ಗಮನಕ್ಕೆ ತಂದರೂ ಏನೂ ಲಾಭವಾಗಿಲ್ಲ. ಕಷ್ಟ ಕೇಳಲು ಬರದವರು ಮತ ಕೇಳಲಿಉ ಬಂದಿದ್ದೀರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.