ಇತಿಹಾಸ ಸೃಷ್ಟಿಸಿದ ಹರಿಯಾಣದ ಜನತೆ: ಗೆಲುವಿನ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದ ನಂತರ ಪ್ರಧಾನಿ ಮೋದಿ ಮಂಗಳವಾರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿದರು.

ಮೋದಿ ಆವರಣವನ್ನು ಪ್ರವೇಶಿಸುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಅದ್ದೂರಿಯಾಗಿ ಸ್ವಾಗತಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವು ಗಣ್ಯರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಈ ಬಾರಿ ಹರಿಯಾಣದ ಜನ ಕೊಟ್ಟ ತೀರ್ಮಾನ ಅದ್ಭುತವಾಗಿದೆ. ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವುದು ಸಂತಸ ತಂದಿದೆ. ಹರಿಯಾಣ ಜನ ಬಿಜೆಪಿಗೆ 3ನೇ ಬಾರಿಗೆ ಗೆಲುವು ತಂದುಕೊಟ್ಟಿದ್ದಾರೆ. ಇದು ಕಾರ್ಯಕರ್ತರ ಪರಿಶ್ರಮದ ಗೆಲುವು. ಹರಿಯಾಣದ ಜನ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಹೇಳಿದ್ದಾರೆ.

ಎಲ್ಲಾ ಜಾತಿಯ ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದ ಗೆಲುವಾಗಿದೆ. ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುತ್ತೇನೆ. ನಡ್ಡಾ ತಂಡದ ಪ್ರಯತ್ನದಿಂದ ಗೆಲುವು ದೊರೆತಿದೆ. ನವರಾತ್ರಿಯ ದಿನ ದೇವಿ ನಮಗೆ ಆಶೀರ್ವಾದ ಮಾಡಿದ್ದಾಳೆ. ನವರಾತ್ರಿಯ ಕಾತ್ಯಾಯಿನಿ ದಿನ ಕಮಲ ಅರಳಿದೆ. ಜಮ್ಮು ಕಾಶ್ಮೀರದಲ್ಲಿ ಶಾಂತಿಯುತ ಮತದಾನ ನಡೆಯಿತು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಗೆಲುವಾಗಿದೆ. ಜಮ್ಮು ಮತ್ತು ಕಾಶ್ಮೀರ, ಹರಿಯಾಣ ಜನತೆಗೆ ಧನ್ಯವಾದಗಳು ಎಂದು ಮೋದಿ ಹೇಳಿದ್ದಾರೆ.

ಜಮ್ಮು ಕಾಶ್ಮೀರ ಜನರು ಎನ್‌ಸಿ ಒಕ್ಕೂಟಕ್ಕೆ ಹೆಚ್ಚು ಸ್ಥಾನ ನೀಡಿದ್ದಾರೆ. ಅವರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಎಷ್ಟು ಪಕ್ಷಗಳು ಚುನಾವಣಾ ಅಖಾಡದಲ್ಲಿದ್ದವು, ಅದರಲ್ಲಿ ಬಿಜೆಪಿ ಹೆಚ್ಚು ಮತ ಪಡೆದಿದೆ. ಅಲ್ಲಿ ಗೆಲವು ಸಾಧಿಸಿದ ಜನರಿಗೆ ಅಭಿನಂದನೆ ಹೇಳುತ್ತೇನೆ. ಎರಡು ರಾಜ್ಯದ ನಮ್ಮ ಕಾರ್ಯಕರ್ತರಿಗೆ ಧನ್ಯವಾದ ಹೇಳ್ತೀವಿ. ಇದು ಕಾರ್ಯಕರ್ತರ ಶ್ರಮದಿಂದ ಗೆಲುವು ಸಾಧ್ಯವಾಗಿದೆ. ನಡ್ಡಾ ಅವರ ತಂಡದ ಗೆಲುವಾಗಿದೆ. ನಮ್ಮ ಸಿಎಂ ಕರ್ತವ್ಯದ ಜಯವಾಗಿದೆ ಎಂದು ಹೊಗಳಿದ್ದಾರೆ.

ಸುಳ್ಳಿನ ರಾಶಿಯ ಮೇಲೆ ಅಭಿವೃದ್ಧಿ ಗ್ಯಾರಂಟಿ ಹೊರೆಯಾಯಿತು. ಹರಿಯಾಣ ಜನರು ಹೊಸ ಇತಿಹಾಸ ರಚಿಸಿದ್ದಾರೆ. 1966 ರಿಂದ ಸತತ ಮೂರನೇ ಬಾರಿಗೆ ಯಾವ ಪಕ್ಷ ಅಧಿಕಾರಕ್ಕೆ ಬಂದಿಲ್ಲ. ದೊಡ್ಡ ದೊಡ್ಡ ಪಕ್ಷಗಳು ಆಡಳಿತ ನಡೆಸಿವೆ. ಇದು ಯಾರಿಗೂ ಸಾಧ್ಯವಾಗಲಿಲ್ಲ. ಹರಿಯಾಣದ ಜನರು ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಿಸುತ್ತಾರೆ. ಈ ಬಾರಿ ಹರಿಯಾಣದ ಜನರು ಮಾಡಿರುವುದು ಅಭೂತಪೂರ್ವವಾಗಿದೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

ಕೇವಲ ಮೂರನೇ ಬಾರಿಗೆ ಸರ್ಕಾರ ಬಂದಿಲ್ಲ. ಮತ ಪ್ರಮಾಣವು ಅಧಿಕವಾಗಿದೆ. ಈ ಜನಾದೇಶ ಸಂದೇಶ ದೂರ ದೂರದವರೆಗೂ ಹೋಗಲಿದೆ. ಬಿಜೆಪಿ ಪ್ರಂಪಚ ದೊಡ್ಡ ಪಕ್ಷ ಮಾತ್ರವಲ್ಲ, ಬಿಜೆಪಿ ಪ್ರಂಪಚದಲ್ಲೇ ಅತಿ ಹೆಚ್ಚು ಜನರ ಹೃದಯದಲ್ಲಿದೆ. ಜನರು ನಮ್ಮ ಅಭಿವೃದ್ಧಿ ಕೆಲಸಕ್ಕೆ ಹ್ಯಾಟ್ರಿಕ್ ಅವಕಾಶ ನೀಡಿದ್ದಾರೆ. ಗುಜರಾತ್ ಮಧ್ಯಪ್ರದೇಶ ಜನರು ಎರಡು ದಶಕದಿಂದ ಆಶೀರ್ವಾದ ಮಾಡಿದ್ದಾರೆ. ಯುಪಿ ಬಿಹಾರದಲ್ಲಿ ಕಾನೂನು ಸ್ಥಾಪಿಸುವ ಎನ್‌ಡಿಎ ಸರ್ಕಾರಕ್ಕೆ ಅವಕಾಶ ನೀಡಿದ್ದಾರೆ. ಎಲ್ಲೆಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆಯೋ ಅಲ್ಲಿ ದೀರ್ಘಾವಧಿಗೆ ಬೆಂಬಲ ನೀಡುತ್ತಾರೆ. ಮತ್ತೊಂದು ಕಡೆ ಕಾಂಗ್ರೆಸ್ ಸರ್ಕಾರ ಎಲ್ಲೂ ವಾಪಸ್ ಬರ್ತಿಲ್ಲ. 13 ವರ್ಷ ಮುಂಚೆ ಅಸ್ಸಾಂ ಸರ್ಕಾರ ವಾಪಸ್ ಬಂದಿತ್ತು. ಆ ಬಳಿಕ ನಡೆದ ಚುನಾವಣೆಗಳಲ್ಲಿ ಎರಡನೇ ಅವಕಾಶ ಕಾಂಗ್ರೆಸ್‌ಗೆ ನೀಡಿಲ್ಲ. ದೇಶದ ರಾಜ್ಯಗಳಲ್ಲಿ ಒಮ್ಮೆ ತೆಗೆದು ಹಾಕಿದ್ದಾರೆ. ಮತ್ತೆ ವಾಪಸ್ ಬರಲು ಕಾಂಗ್ರೆಸ್‌ಗೆ ಅವಕಾಶ ನೀಡಿಲ್ಲ ಎಂದು ಕುಟುಕಿದ್ದಾರೆ.

ಮೊದಲು ಕಾಂಗ್ರೆಸ್ ಕೆಲಸ ಮಾಡದರೂ, ಮಾಡಿದಿದ್ದರೂ ಜನರು ಮತ ಕೊಡ್ತಾರೆ ಅನ್ನುವ ಮನಸ್ಥಿತಿ ಇತ್ತು. ಸರ್ಕಾರ ತಮ್ಮ ಜನ್ಮಸಿದ್ಧ ಹಕ್ಕು ಎಂದು ಭಾವಿಸುತ್ತಿತ್ತು. ಅಧಿಕಾರ ಇಲ್ಲದೇ ನೀರಿನಿಂದ ಹೊರ ಬಿದ್ದ ಮೀನಿನಂತೆ ಕಾಂಗ್ರೆಸ್ ಆಗಿದೆ. ಈಗ ಅವರ ಪರಿಸ್ಥಿತಿ ಬದಲಾಗಿದೆ. ಕಾಂಗ್ರೆಸ್ ಹೇಗೆ ವಿಷ ಬೀಜ ಬಿತ್ತಿದೆ ಎಂದು ಇಡೀ ದೇಶವೇ ನೋಡಿದೆ. ಹಲವು ತಲೆಮಾರುಗಳನ್ನು ಜಾತಿ ಹೆಸರಿನಲ್ಲಿ ಹೊಡೆದಾಡಲು ಬಿಟ್ಟಿದೆ. ಹಿಂದುಳಿದ ವರ್ಗ, ದಲಿತರ ಮೇಲೆ ಹೆಚ್ಚು ಶೋಷಣೆ ಮಾಡಿದೆ. ಅಧಿಕಾರ ಸಿಕ್ಕಾಗ ಎಂದು ದಲಿತ ಹಿಂದುಳಿದ ವರ್ಗದವರಿಗೆ ಅಧಿಕಾರ ನೀಡಲಿಲ್ಲ. ಕಾಂಗ್ರೆಸ್ ಪರಿವಾರ ದಲಿತ ಹಿಂದುಳಿದ ಆದಿವಾಸಿಗಳನ್ನು ದ್ವೇಷ ಮಾಡುತ್ತದೆ. ಈ ಎಲ್ಲ ವರ್ಗದ ಜನರು ಉನ್ನತ ಸ್ಥಾನಕ್ಕೆ ಹೋಗ್ತಿದ್ದರೆ ಇವರ ಹೊಟ್ಟೆಯಲ್ಲಿ ಇಲಿ ಓಡಾಡುತ್ತವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ 48 ಸ್ಥಾನಗಳನ್ನು ಗೆದ್ದಿದ್ದು, ಹರಿಯಾಣದಲ್ಲಿ ಸತತ ಮೂರನೇ ಬಾರಿಗೆ ದಾಖಲೆಯ ಮೂರನೇ ಅವಧಿಗೆ ದಾರಿ ಮಾಡಿಕೊಟ್ಟಿದೆ. ಮತ್ತೊಂದೆಡೆ, 90 ಸದಸ್ಯರ ವಿಧಾನಸಭೆಯಲ್ಲಿ ಕಾಂಗ್ರೆಸ್ 37 ಸ್ಥಾನಗಳನ್ನು ಗೆದ್ದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!