ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಬ್ರ್ಯಾಂಡ್ ಬೆಂಗಳೂರು ಆಗಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ನಗರಾಭಿವೃದ್ಧಿ, ಕೃಷಿ, ಶಿಕ್ಷಣಕ್ಕೆ ಬಜೆಟ್ನಲ್ಲಿ ಆದ್ಯತೆ. ಜೊತೆಗೆ ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಬೆಂಗಳೂರಿಗೆ ಎಲ್ಲ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಬಜೆಟ್ನಲ್ಲಿ 5 ಗ್ಯಾರಂಟಿ ಯೋಜನೆಗಳ ಜೊತೆಗೆ 6 ಅಭಿವೃದ್ಧಿ ಆಯಾಮ ಗುರುತಿಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ. ಜೊತೆಗೆ ಗ್ರಾಮೀಣ ಅಭಿವೃದ್ಧಿಯೆ ಒತ್ತು ನೀಡುತ್ತೇವೆ.
ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ಅನುದಾನ. 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಗೆ 440 ಕೋಟಿ ರೂ. ಸಹಾಯ ಧನ ನೀಡಲಾಗುವುದು. ಎಲ್ಲಾ ವಿಧಾನಸಬಾ ಕ್ಷೇತ್ರಗಳಲ್ಲಿ ರಸ್ತೆ ಅಭಿವೃದ್ಧಿಗೆ ₹8 ಸಾವಿರ ಕೋಟಿ ಮೀಸಲು ಎಂದು ಸಿಎಂ ಹೇಳಿದ್ದಾರೆ.