ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೆಚ್ಚಿನ ಮಕ್ಕಳನ್ನು ಹೊಂದಲು ದಕ್ಷಿಣ ಭಾರತದ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.
ವೃದ್ಧರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಕುಟುಂಬಗಳು ಹೆಚ್ಚು ಮಕ್ಕಳನ್ನು ಹೊಂದಲು ಪ್ರೋತ್ಸಾಹಿಸಲು ಹೊಸ ಕಾನೂನುಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು. ಜನಸಂಖ್ಯೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದರು.
ಎರಡು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಮಾತ್ರ ಸ್ಥಳೀಯ ಚುನಾವಣೆಯಲ್ಲಿ ಭಾಗವಹಿಸಲು ಅವಕಾಶ ನೀಡುವ ಕಾನೂನನ್ನು ರಾಜ್ಯ ಸರ್ಕಾರ ಪರಿಗಣಿಸುತ್ತಿದೆ ಎಂದು ನಾಯ್ಡು ಹೇಳಿದರು. ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಹೆಚ್ಚಿನ ಪ್ರಯೋಜನಗಳನ್ನು ಒದಗಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.