ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರಿಯುತ್ತಿದ್ದಂತೆಯೇ ಡಿಸಿಎಂ ಡಿಕೆ ಶಿವಕುಮಾರ್ ಹೈದರಾಬಾದ್‌ಗೆ ಎಂಟ್ರಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ತೆಲಂಗಾಣದ ಜನತೆ ಬದಲಾವಣೆಯನ್ನು ಬಯಸಿದ್ದಾರೆ. ಪ್ರಗತಿ ಹಾಗೂ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎನ್ನುವುದನ್ನು ಅವರು ಅರಿತಿದ್ದಾರೆ.
ನಮ್ಮ ಪಕ್ಷದಲ್ಲಿ ಒಗ್ಗಟ್ಟಿದೆ. ಒಗ್ಗಟ್ಟಿನಿಂದಲೇ ಗೆಲುವು ಸಾಧಿಸುತ್ತೇವೆ. ಉಳಿದ ಪಕ್ಷಗಳಿಗೆ ನಮ್ಮ ಗೆಲುವಿನಿಂದಲೇ ಉತ್ತರ ಕೊಡುತ್ತೇವೆ ಎಂದಿದ್ದಾರೆ.