ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಅಪಶಕುನ’ ಎಂದು ಕರೆದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮುಂಬರುವ ಚುನಾವಣೆಗಳಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಕುರಿತು ಅಸಂಬದ್ಧ ಪದಗಳ ಬಳಕೆ ಮಾಡುತ್ತಿರುವ ರಾಹುಲ್ ಗಾಂಧಿಗೆ ತೆಲಂಗಾಣದ ಜನರು ವೋಟುಗಳ ಮೂಲಕವೇ ಉತ್ತರಿಸಲಿದ್ದಾರೆ ಎಂದರು.
ನವೆಂಬರ್19ರಂದು ಗುಜರಾತ್‌ನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ಏಕದಿನ ವಿಶ್ವಕಪ್ ಫೈನಲ್ ಪಂದ್ಯಾವಾಳಿ ನಡೆದಿತ್ತು. ಈ ಪಂದ್ಯ ವೀಕ್ಷಿಸಲು ಪ್ರಧಾನಿ ತೆರಳಿದ್ದರು. ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲನುಭವಿಸಿತ್ತು. ಈ ಸೋಲಿಗೆ ಮೋದಿ ಪಂದ್ಯ ವೀಕ್ಷಿಸಲು ತೆರಳಿದ್ದೆ ಕಾರಣ ಎಂದು ರಾಹುಲ್ ವ್ಯಂಗ್ಯವಾಡಿದ್ದರು.