ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹ ಸಚಿವರಾಗಲು ಯೋಗ್ಯರಲ್ಲ ಎಂದು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿರುವ ಮಾತಿಗೆ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಅದು ನನಗೆ ಬಹಳ ಸಂತೋಷ ತಂದಿದೆ. ಅವರು ಹೇಳಿದ್ದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು. ನಾನು ಮೂರ್ನಾಲ್ಕು ಬಾರಿ ಗೃಹ ಸಚಿವನಾಗಿದ್ದೇನೆ. ಸಮರ್ಥವಾಗಿ ನಾನು ಎಲ್ಲವನ್ನೂ ನಿಭಾಯಿಸಿದ್ದೇನೆ. ನನ್ನ ಸಾಮರ್ಥ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದು ಹೇಳಿದ್ದಾರೆ.
ಗೃಹಸಚಿವ ಡಾ.ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ವಿಧಾನಸೌಧದಲ್ಲಿ ಸಂಪುಟ ಉಪಸಮಿತಿ ಸಭೆ ನಡೆಸಲಾಗಿದೆ. ಬಿಜೆಪಿ ಕಾಲದ ಹಗರಣಗಳ ತನಿಖೆಗೆ ಸಮಿತಿ ರಚಿಸಲಾಗಿದೆ. ನಾವು ಇಂದು ಮೊದಲ ಸಭೆ ಮಾಡಿದ್ದೇವೆ. ಮೂರ್ನಾಲ್ಕು ಕೇಸ್ಗಳನ್ನು ತನಿಖೆಗೆ ಕೊಡುವ ಬಗ್ಗೆ ನಿರ್ಧಾರ ಮಾಡಿದ್ದೇವೆ ಎಂದು ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.