Thursday, July 7, 2022

Latest Posts

ಅಭಿವೃದ್ಧಿ ಕೆಲಸಗಳನ್ನು ಜನ ಗುರುತಿಸಿ ಮತ ಹಾಕಿ ಗೆಲ್ಲಿಸುತ್ತಾರೆ: ಜಗದೀಶ ಶೆಟ್ಟರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ,ಹುಬ್ಬಳ್ಳಿ:

ಎರಡು ವರ್ಷಗಳ ಅವಧಿಯಲ್ಲಿ ಪಕ್ಷವು ಅವಳಿನಗರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಜನ ಗುರುತಿಸಿ ಮತ ಹಾಕಿ ಮೂರನೇ ಬಾರಿಗೂ ಜನ ಗೆಲ್ಲಿಸುತ್ತಾರೆ ಎಂದು ಶಾಸಕ ಜಗದೀಶ ಶೆಟ್ಟರ ಹೇಳಿದರು.
ಇಲ್ಲಿಯ ದೇಶಪಾಂಡೆ ನಗರದ ಪಕ್ಷದ ಪಾಲಿಕೆ ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ವಾಡ್೯ ಮಟ್ಟದಲ್ಲಿ ಅಭ್ಯರ್ಥಿಗಳು ಕಚೇರಿಯನ್ನು ಪ್ರಾರಂಭಿಸಿ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಸ್ಥಳಿಯ ಮುಖಂಡರು ಅಭ್ಯರ್ಥಿಗಳೊಂದಿಗೆ ಮನೆ ಮನೆಗೆ ತೆರಳಿ ಮತ ಯಾಚನೆ ಮಾಡುತ್ತಿದ್ದಾರೆ. ಎರಡು ದಿನದಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾಗಲಿದೆ ಎಂದರು.
2013ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷವು ಬಿಜೆಪಿ, ಕೆಜೆಪಿ ಹಾಗೂ ಬಿಎಸ್ ಆರ್ ಕಾಂಗ್ರೆಸ್ ಆಗಿ ವಿಭಜನೆಯಾಗಿತ್ತು. ಆದರೂ ಸಂಘಟಿತ ಪ್ರಯತ್ನದಿಂದ ಪಾಲಿಕೆ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು ಎಂದರು.
ರಸ್ತೆ ಸೇರಿದಂತೆ ಮೂಲಸೌಕರ್ಯವಿಲ್ಲ ಎಂದು ಭೈರಿದೇವರಕೊಪ್ಪದ ರಾಜಧಾನಿ ಕಾಲೊನಿಯ ಚುನಾವಣೆ ಬಹಿಷ್ಕಾರಿಸಿರುವ ಸ್ಥಳೀಯರೊಂದಿಗೆ ಪಕ್ಷದ ಮುಖಂಡರು ಮಾತುಕತೆ ನಡೆಸಿದ್ದಾರೆ. ಚುನಾವಣಾ ಬಳಿಕ ಬೇಡಿಕೆ ಈಡೇರಿಸುವ ಭರವಸೆ ನೀಡಿ ಮನವೊಲಿಸುವ ಯತ್ನ ನಡೆಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು ಶೆಟ್ಟರ ಪಕ್ಷದಲ್ಲಿ ಗೂಂಡಾಗಿರಿಗೆ ಅವಕಾಶವಿಲ್ಲ. ನನ್ನ ಕ್ಷೇತ್ರದ ಕೆಲ ವಾಡ್೯ಗಳ ಅಭ್ಯರ್ಥಿಗಳು ಇತರ ಪಕ್ಷಗಳ ಅಭ್ಯರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಸುಳ್ಳಿನಿಂದ ಕೂಡಿದೆ ಎಂದರು.
ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ಅವಳಿನಗರಕ್ಕೆ ಜಗದೀಶ ಶೆಟ್ಟರ ಮತ್ತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೊಡುಗೆ ಅಪಾರ ಅವರ ನೇತೃತ್ವದಲ್ಲಿ ಕುಡಿಯುವ ನೀರಿನ ಯೋಜನೆ, ಸ್ಮಾರ್ಟ್ ಸಿಟಿ, ವಿಮಾನ ನಿಲ್ದಾಣ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕೆಸಗಳು ನಡೆದಿವೆ. ಜನ ಬದಲಾವಣೆಯನ್ನು ಗುರುತಿಸಿ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವ ವಿಶ್ವಾಸವಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ನಾಗೇಶ ಕಲಬುರ್ಗಿ, ಜಿಲ್ಲಾ ವಕ್ತಾರ ರವಿ ನಾಯಕ, ಬಸವರಾಜ ಕುಂದಗೋಳಮಠ, ದತ್ತು ಮೂರ್ತಿ ಕುಲಕರ್ಣಿ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss