September 2, 2026
Wednesday, September 2, 2026
spot_img

ಜನರು ಸರ್ಕಾರವನ್ನು ಹುಡುಕಿಕೊಂಡು ಬರೋದಲ್ಲ, ಸರ್ಕಾರವೇ ಜನರನ್ನು ಹುಡುಕಿಕೊಂಡು ಹೋಗಬೇಕು: ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾರ್ವಜಿಕರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗೆ ಅಲೆದಾಡುವ ಸಮಯ ಇಲ್ಲಿಗೇ ನಿಲ್ಲಬೇಕು. ಸರ್ಕಾರವೇ ಜನರ ಮನೆ ಮನೆ ತಲುಪುವ ಕೆಲಸವಾಗಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಎಲ್ಲ ಸರ್ಕಾರಿ ಅಧಿಕಾರಿಗಳು ತಮ್ಮ ಕೇಂದ್ರ ಕಚೇರಿಗಳಲ್ಲೇ ಲಭ್ಯವಿದ್ದು, ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ನಿರ್ದೇಶಿಸಿದರು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಅಧಿಕಾರಿಗಳ ಹಾಜರಾತಿ ಮತ್ತು ಚಲನ-ವಲನ ದಾಖಲಾತಿಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು ಎಂದು ಸೂಚಿಸಿದ ಅವರು, ಸಾರ್ವಜನಿಕರು ಒಂದೇ ಕೆಲಸಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಮತ್ತೆ ಮತ್ತೆ ಅಲೆದಾಡುವ ಪರಿಸ್ಥಿತಿಗೆ ಅಂತ್ಯ ಹಾಡಬೇಕು ಎಂದು ಹೇಳಿದರು.

ಅಧಿಕಾರಿಗಳು ಜನರೊಂದಿಗೆ ಗೌರವಯುತವಾಗಿ ಹಾಗೂ ಸಂವೇದನಾಶೀಲವಾಗಿ ವರ್ತಿಸಬೇಕು. ಸಾರ್ವಜನಿಕ ಸೇವೆಯೇ ಅವರ ಮೊದಲ ಆದ್ಯತೆಯಾಗಬೇಕು. ಜನಕೇಂದ್ರಿತ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ‘ಪ್ರಜಾಸೇವಾ ಇಲಾಖೆ’ ಎಂಬ ಹೊಸ ಇಲಾಖೆಯನ್ನು ಸ್ಥಾಪಿಸಲಾಗುವುದು. ಈ ಇಲಾಖೆಗೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಘೋಷಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !