ಮೋದಿಯವರ ಯೋಜನೆಯನ್ನು ಜನ ಬೆಂಬಲಿಸುತ್ತಾರೆ: ಅರುಣ್‌ ಸಿಂಗ್‌

ಹೊಸದಿಗಂತ ವರದಿ ಬೆಳಗಾವಿ:‌

ಪ್ರಧಾನಿ ನರೇಂದ್ರ ‌ಮೋದಿಯವರ ಯೋಜನೆಯನ್ನು ದೇಶದ ಜನತೆ ಮೆಚ್ಚಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಬಡವರು, ಸಾಮಾನ್ಯ‌ ವರ್ಗ ಹಾಗೂ‌ ರೈತರ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದರು.

ಉತ್ತರ ಕರ್ನಾಟಕದ ಮಹದಾಯಿ ನದಿ ನೀರಿನ ಸಮಸ್ಯೆಯನ್ನು ಶೀಘ್ರದಲ್ಲೇ ಇತ್ಯರ್ಥ ಪಡಿಸಲಾಗುವುದು. ಇದು ಬಹು ದೊಡ್ಡ ವಿಷಯವಾಗಿದ್ದ, ಆದಷ್ಟು ಬೇಗ ಈ ಸಮಸ್ಯೆ ಬಗೆಹರಿಸಲಾಗುವುದು ಎಂದರು. ಕಾಂಗ್ರೆಸ್ ಪಂಚರಾಜ್ಯ ಚುನಾವಣೆಯಲ್ಲಿ ಹೇಳ ಹೆಸರಿಲ್ಲದಂತೆ ಅಳಿಸಿ ಹೋಗಿದೆ. ಕಾಂಗ್ರೆಸ್‌ಗೆ ಈಗ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ ಎಂದು ಟೀಕೆ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!