Tuesday, June 28, 2022

Latest Posts

ದೇಶ, ರಾಜ್ಯದ ಜನ ಬದಲಾವಣೆ ಬಯಸುತ್ತಿದ್ದಾರೆ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ

ಹೊಸದಿಗಂತ ವರದಿ, ಕಲಬುರಗಿ:

ದೇಶದಲ್ಲಿ ತೈಲ ಬೆಲೆ, ಅನಿಲ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಎರುತ್ತಿದ್ದು, ಜನ ಈ ಬಾರಿ ದೇಶ ಮತ್ತು ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ ಎಂದು ರಾಜ್ಯ  ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.
ಅವರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಕನಾ೯ಟಕದಲ್ಲಿ ಬದಲಾವಣೆ ಗಾಳಿ ಬಿಸುತ್ತಿದೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಸರಕಾರ ಸಂಪೂರ್ಣವಾಗಿ ಕಾಲಿನಿಂದ, ತಲೆವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದರು.
ರಾಜ್ಯ ಕಾಂಗ್ರೆಸ್ ನಾಯಕರಿಂದ ಸೋನಿಯಾ ಗಾಂಧಿಗೆ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಒಂದು ಕುಟುಂಬವಿದ್ದಂತೆ. ಕುಟುಂಬದ ಮುಖ್ಯಸ್ಥರಿಗೆ ಪತ್ರ ಬರೆಯುವ ಮುಕ್ತ ಅವಕಾಶ ಇದೆ ಎಂದ ಅವರು, ಪಕ್ಷದ ಯಾವ ಕಾಯ೯ಕತ೯ರು ಸಹ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು, ತಮ್ಮ ಅಭಿಪ್ರಾಯ ತಿಳಿಸಬಹುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss