ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ.
ಮಂಗಳವಾರರಾತ್ರಿ 11:41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ ಬಳಿಕ ಬುಧವಾರ ಬೆಳಿಗ್ಗೆ 5:30ರ ಸುಮಾರಿಗೆ ಭೂಮಿ ಕಂಪಿಸಿದೆ. ಸಿಸಿಟಿವಿ ದೃಶ್ಯದಲ್ಲಿಯೂ ಭೂಕಂಪನದ ತೀವ್ರತೆ ದಾಖಲಾಗಿದೆ.
3.0 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸರಣಿ ಭೂಕಂಪನದಿಂದ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
ವಿಜಯಪುರದಲ್ಲಿ ಸರಣಿ ಭೂಕಂಪನಕ್ಕೆ ಬೆಚ್ಚಿಬಿದ್ದ ಜನ: 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ

