ಬಿಜೆಪಿಯನ್ನು ಕಿತ್ತೊಗೆಯುವ ಸಂಕಲ್ಪ ಮಾಡಿರುವ ಜನರು ʼಸಂಕಲ್ಪʼ ಯಾತ್ರೆಗೆ ಬರುತ್ತಿಲ್ಲ: ಸಿದ್ದರಾಮಯ್ಯ ಲೇವಡಿ

ಹೊಸದಿಗಂತ ವರದಿ, ಹುಬ್ಬಳ್ಳಿ:
ರಾಜ್ಯದ ಜನರು ಬಿಜೆಪಿ ಜನರನ್ನು ಕಿತ್ತೊಗೆಯುವ ಸಂಕಲ್ಪ ಮಾಡಿದ್ದಾರೆ. ಆದರಿಂದ ಅವರು ನಡೆಸುತ್ತಿರುವ ಜನ ಸಂಕಲ್ಪ ಯಾತ್ರೆ ಜನರು ಬರುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.‌
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಕಲ್ಪ ಯಾತ್ರೆಗೆ ಬರುವ ಅಲ್ಪಸ್ವಲ್ಪ ಜನರು ಹೊರಗೆ ತೆರಳದಂತೆ ಗೇಟ್ ಗೆ ಬೀಗ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆರ್ಥಿಕವಾಗಿ ಹಿಂದುಳಿದವರಿಗೆ (ಇಡಬ್ಲ್ಯೂಎಸ್) ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಅನುಚ್ಛೇದ 15 ಮತ್ತು 16ರ ಪ್ರಕಾರ, ಅಸ್ಪೃಶ್ಯರಿಗೆ ಹಾಗೂ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ ನೀಡಬಹುದಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಇಡಬ್ಲ್ಯೂಎಸ್ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಗಮನಿಸಿಲ್ಲ. ಆದರೆ, ಮೀಸಲಾತಿ ನೀಡಲು ಅದರದ್ದೇ ಆದ ಮಾನದಂಡಗಳಿವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!