ಪಟಾಕಿ ಸೌಂಡಿಗೂ ಜನರಿಗೆ ಭಯ ಆಗ್ಬೋದು: ಚಂಡೀಗಢ ಸರ್ಕಾರದಿಂದ 2 ತಿಂಗಳು ಕ್ರಾಕರ್ಸ್‌ ಬ್ಯಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ಮತ್ತು ಪಾಕಿಸ್ತಾನದ  ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಚಂಡೀಗಢ ಸರ್ಕಾರ 2 ತಿಂಗಳುಗಳ ಕಾಲ ಪಟಾಕಿ ನಿಷೇಧಿಸಿದೆ.

ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ಯುದ್ಧ ಭೀತಿ ಹಿನ್ನೆಲೆ ಇದೀಗ ಚಂಡೀಗಢ ಸರ್ಕಾರ ಎರಡು ತಿಂಗಳುಗಳ ಪಟಾಕಿ ನಿಷೇಧಿಸಿದೆ. ಮದುವೆ, ಶುಭ ಸಮಾರಂಭಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ. ಇನ್ನೂ ರಾಜಸ್ಥಾನದ ಜೈಸಲ್ಮೇರ್‌ನಲ್ಲಿಯೂ ಪಟಾಕಿ ಸಿಡಿಸುವುದರ ಜೊತೆಗೆ ಮಾರಾಟ ಹಾಗೂ ಖರೀದಿಯನ್ನು ನಿಷೇಧಿಸಿಲಾಗಿದೆ.

ಮದುವೆ, ಶುಭ ಸಮಾರಂಭ ಹಾಗೂ ಧಾರ್ಮಿಕ ಹಬ್ಬಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಕಾರಣ ಯುದ್ಧ ಭೀತಿಯ ಸಂದರ್ಭದಲ್ಲಿ ಈ ರೀತಿ ಪಟಾಕಿ ಶಬ್ದವು ಡ್ರೋನ್ ಹಾಗೂ ಕ್ಷಿಪಣೆ ದಾಳಿಯ ಭ್ರಮೆಯನ್ನು ಸೃಷ್ಟಿಸಿ, ಸಾರ್ವಜನಿಕರಲ್ಲಿ ಭಯ ಉಂಟು ಮಾಡುತ್ತದೆ. ಹೀಗಾಗಿ ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!