ಲೋಕಸಭಾ ಚುನಾವಣೆಯಲ್ಲಿ ಜನ ಎಲ್ಲಾ ಅಡೆತಡೆಗಳನ್ನು ಮುರಿದು ಬಿಜೆಪಿ ಬೆಂಬಲಿಸಲಿದ್ದಾರೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ಎಲ್ಲಾ ಅಡೆತಡೆಗಳನ್ನು ಮುರಿದು ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ದೆಹಲಿಯಲ್ಲಿ ಮಾಧ್ಯಮ ಸಂಸ್ಥೆ ಆಯೋಜಿಸಿದ್ದ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು ಕಳೆದ ಒಂಬತ್ತು ವರ್ಷಗಳಲ್ಲಿ ದೇಶವು ಹಲವಾರು ಅಡೆತಡೆಗಳನ್ನು ಮುರಿದಿದೆ ಮತ್ತು ಇಂದು ದೇಶವು ಆತ್ಮವಿಶ್ವಾಸದಿಂದಿದೆ ಎಂದು ಪ್ರತಿಪಾದಿಸಿದರು.

ಕಾರ್ಯಕ್ರಮದ ವಿಷಯವಾದ ‘ಬಿಯಾಂಡ್ ಬ್ಯಾರಿಯರ್ಸ್’ ಅನ್ನು ಉಲ್ಲೇಖಿಸಿದ ಅವರು, ಆಡಳಿತಾರೂಢ ಬಿಜೆಪಿ ಸರ್ಕಾರದ ನಡೆಗೆ ಜನರ ಸಂಪೂರ್ಣ ಬೆಂಬಲವಿದೆ ಎಂಬುದಕ್ಕೆ 2024ರ ಲೋಕಸಭೆ ಚುನಾವಣೆ ಫಲಿತಾಂಶ ಸಾಕ್ಷಿಯಾಗಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ʼಭಾರತವನ್ನು ಮರುರೂಪಿಸುವುದು’ ರಿಂದ ಹಿಡಿದು ‘ಬಿಯಾಂಡ್ ಬ್ಯಾರಿಯರ್ಸ್’ ವರೆಗಿನ ಪ್ರಯಾಣವು ದೇಶದ ಉಜ್ವಲ ಭವಿಷ್ಯಕ್ಕೆ ಅಡಿಪಾಯವನ್ನು ಹಾಕಿದೆ. ಈ ಅಡಿಪಾಯಗಳ ಮೇಲೆ ಸಮೃದ್ಧ ಭಾರತವನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

ಸರ್ಕಾರದ ಉಪಕ್ರಮಗಳಿಂದಾಗಿ ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದೇಶವು ಅಡೆತಡೆಗಳನ್ನು ಮುರಿದಿದೆ. 2014 ರಿಂದ ನಾವು ಅನೇಕ ಅಡೆತಡೆಗಳನ್ನು ಮುರಿಯಲು ಶ್ರಮಿಸುತ್ತಿದ್ದೇವೆ. ಅದಕ್ಕಾಗಿಯೇ ನಾವು ಇಂದು ಅಡೆತಡೆಗಳನ್ನು ಮೀರಿ ಭಾರತದ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ತಿಳಿಸಿದರು.

ಇಂದು ಭಾರತ ಚಂದ್ರನನ್ನು ತಲುಪಿ ಇತಿಹಾಸ ಸೃಷ್ಟಿಸಿದೆ. ಡಿಜಿಟಲ್ ವಹಿವಾಟಿನಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಮೊಬೈಲ್ ಉತ್ಪಾದನೆಯಲ್ಲಿ ಭಾರತ ಮುಂಚೂಣಿಯಲ್ಲಿದೆ. ಇಂದು ಭಾರತವು ಜಿ-20 ಅಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂದು ಪ್ರತಿಯೊಬ್ಬ ಭಾರತೀಯನು ಆತ್ಮವಿಶ್ವಾಸದಿಂದಿದ್ದಾನೆ.
ದೇಶವು ಅನೇಕ ಅಡೆತಡೆಗಳಿಂದ ಹೊರಬರುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!