ವಿಕಲಚೇತನರು, 80 ವರ್ಷ ಮೇಲ್ಪಟ್ಟವರು ಮನೆಯಿಂದಲೇ ಮಾಡಬಹುದು ಮತದಾನ: ಹೇಗೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲೇ ಮೇ 10ರಂದು ಮತದಾನ ನೆರಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣೆ ಆಯೋಗವು ಕೆಲವರಿಗೆ ಮನೆಯಿಂದ ಮತದಾನ ಮಾಡುವ ಅವಕಾಶವನ್ನು ನೀಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ.

ಈ ಕುರಿತು ಇಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು​ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ಮೂಲಕ ಇದೇ ಮೊದಲ ಬಾರಿಗೆ ನಾವು ಕರ್ನಾಟಕದಲ್ಲಿ 80 ವರ್ಷಕ್ಕೂ ಮೇಲ್ಪಟ್ಟ ಮತ್ತು ಅಂಗವಿಕಲರು (ಪಿಡಬ್ಲ್ಯೂಡಿ) ಮತದಾರರು ಮನೆಗಳಿಂದಲೇ ಮತದಾನ ಮಾಡುವ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಇನ್ನು ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಎಲ್ಲರಿಗೂ ಮತದಾನ ಮಾಡಲು ಅವಕಾಶ ನೀಡಬೇಕು ಎಂಬ ಉದ್ದೇಶದಿಂದ ಅವರೆಲ್ಲರಿಗೂ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ.
ಅಲ್ಲದೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ ಎಂದು ತಿಳಿಸಿದರು.

ಮನೆಯಿಂದಲೇ ಮತದಾನ ಮಾಡುವುದು ಹೇಗೆ ? :

  • ಮೊದಲು ಚುನಾವಣೆ ಆಯೋಗದ ವೆಬ್‌ಸೈಟ್‌, ವೋಟರ್‌ ಹೆಲ್ಪ್‌ಲೈನ್‌ ಅಥವಾ ಸಕ್ಷಮ್‌ ಆ್ಯಪ್‌ನಲ್ಲಿ ನೋಂದಣಿ ಮಾಡಬೇಕು.
  • ಸ್ಥಳೀಯ ಬೂತ್‌ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶವಿರುತ್ತದೆ.
  • ನೀವು ನೋಂದಣಿ ಮಾಡಿಸಿಕೊಂಡ ಬಳಿಕ, ನಿಮ್ಮ ಮನೆಗೆ ಪೊಲೀಸ್‌ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆಯಾಗುತ್ತದೆ.
  • ನಂತರ ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ ಕೊಡಲಾಗುತ್ತದೆ. ಇಡೀ ಮತದಾನ ಪ್ರಕ್ರಿಯೆಯ ಬಗ್ಗೆ ವಿಡಿಯೋ ಚಿತ್ರೀಕರಣ ಕೂಡ ಮಾಡಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!