ಹೊಸದಿಗಂತ ವರದಿ ಕಲಬುರಗಿ:
ಕಾಂಗ್ರೆಸ್ ಪಕ್ಷದ ಅಸ್ತಿತ್ವ ಏನೂ ಇಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಪಕ್ಷದವರ ಮಾತಿಗೆ ಜನರು ಪಂಚರಾಜ್ಯಗಳ ಚುನಾವಣೆಯಲ್ಲಿ ಉತ್ತರ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಭಾನುವಾರ ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣ ರಾಜ್ಯ ಮತ್ತು ಛತ್ತೀಸಗಢ,ನಲ್ಲಿ ನಾವು ಅಧಿಕಾರಕ್ಕೆ ಬರಲಿದ್ದು, ಮಧ್ಯಪ್ರದೇಶ ಹಾಗೂ ರಾಜಸ್ಥಾನ ಕೈತಪ್ಪುವ ಸಾಧ್ಯತೆ ಇದೆ ಎಂದರು.
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಮೂಲಕ ಕಾಂಗ್ರೆಸ್ ಪಕ್ಷ ಮತ್ತೆ ತಲೆ ಎತ್ತಿ ನಿಂತಿದೆ.ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ಪಕ್ಷದವರು ಭಾವಿಸಿದ್ದರು.ಆದರೆ,ಈಗ ಅಲ್ಲಿ ಚೇತರಿಸೋದಷ್ಟೆ ಅಲ್ಲ, ಅಗ್ರ ಗಣ್ಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಹೇಳಿದರು.
ಕಳೆದ ಬಾರಿ ಚಂದ್ರಶೇಖರ ರಾವ್ ಅವರು ಕಾಂಗ್ರೆಸ್ ಕೃಪಾಶೀರ್ವಾದ ಮೂಲಕ ಅಧಿಕಾರಕ್ಕೆ ಬಂದು,ಬಂದ ಮೇಲೆ ಅದೇ ಕಾಂಗ್ರೆಸ್ ಪಕ್ಷವನ್ನು ತುಳಿದಿದ್ದಾರೆ.ಅದಕ್ಕಾಗಿಯೇ ಜನರು ಈಗ ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.
ಲೋಕಸಭಾ ಚುನಾವಣೆ ಕಾಂಗ್ರೆಸ್ ಗೆಲುವು ಖಚಿತ
ಪಂಚರಾಜ್ಯಗಳ ಚುನಾವಣೆ ಫಲಿತಾಂಶದಿಂದ ದೇಶದಲ್ಲಿ ಕಾಂಗ್ರೆಸ್ ಪರವಾದ ಅಲೆ ಪ್ರಾರಂಭವಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಒಕ್ಕೂಟ ಗೆಲುವು ಸಾಧಿಸಲಿದೆ ಎಂದಿದ್ದು,ಆ ಎಲ್ಲ ಸೂಚನೆ ಈ ಫಲಿತಾಂಶದಿಂದ ಕಾಣುತ್ತಿದೆ.