ಈ ಚುನಾವಣೆಯಲ್ಲಿ ಜನರ ಆಶೀರ್ವಾದ ನಮ್ಮ ಮೇಲಿದೆ: ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಿನ್ನೆ ಹಾಗೂ ಮೊನ್ನೆ 2ನೇ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು. ಎಷ್ಟು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಗೊತ್ತಿಲ್ಲ. ಆದರೆ ಗೆಲುವು ನಮ್ಮದು ಎನ್ನುವ ವಿಶ್ವಾಸ ಇದೆ. ಕಳೆದ ಚುನಾವಣೆಯಲ್ಲಿ ತೋರಿದಂತೆ ಈ ಬಾರಿಯೂ ಜನ ಪ್ರೀತಿ ತೋರುತ್ತಾರೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!