Friday, March 24, 2023

Latest Posts

ಜನ ಬೆಂಬಲ ಬಿಜೆಪಿ ಪರವಾಗಿ ಇದೆ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್

ಹೊಸದಿಗಂತ ವರದಿ ಕಲಬುರಗಿ :

ಕಲ್ಯಾಣ ಕನಾ೯ಟಕ ಭಾಗದಲ್ಲಿ ಬಿಜೆಪಿ ಪಕ್ಷದ ವಿಜಯ್ ಸಂಕಲ್ಪ ಯಾತ್ರೆ ಬಸವಕಲ್ಯಾಣ ನಾಡಿನ ಪವಿತ್ರವಾದ ಸ್ಥಾನದಿಂದ ಪ್ರಾರಂಭಗೊಂಡಿದ್ದು,ಈ ಭಾಗದ ಜನರ ಬೆಂಬಲ ಬಿಜೆಪಿ ಪರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ಭಾನುವಾರ ನಗರದ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಕಲ್ಯಾಣ ಕನಾ೯ಟಕ ಭಾಗದ ಜನರು ನಮ್ಮ ಯಾತ್ರೆಯನ್ನು ಅದ್ದೂರಿಯಾಗಿ ಬರಮಾಡಿಕೊಂಡಿದ್ದು, ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 130ಕ್ಕಿಂತ ಅಧಿಕ ಸ್ಥಾನ ಬರುವ ನಿರೀಕ್ಷೆ ಇದೆ ಎಂದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೇವೆ ಎಂಬ ತಿರುಕನ ಕನಸು ಕಾಣುತ್ತಿದೆ. ಈ ಕನಸು ನನಸಾಗುವುದು ಸತ್ಯಕ್ಕೆ ದೂರವಾದ ಮಾತಾಗಿದೆ. ಸದ್ಯಕ್ಕೆ ಐಸಿಯುನಲ್ಲಿರುವ ಕಾಂಗ್ರೆಸ್ ಪಕ್ಷ, ಚುನಾವಣೆ ಫಲಿತಾಂಶ ಬಂದ ಮೇಲೆ ರಾಜ್ಯದಿಂದ ಧೂಳಿಪಟವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ,ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ಸುನೀಲ್ ವಲ್ಯಾಪುರ್, ಮಾಲೀಕಯ್ಯಾ ಗುತ್ತೇದಾರ, ಸಿದ್ದಾಜಿ ಪಾಟೀಲ್, ಮರಾಠಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮೂಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!