April 5, 2026
Sunday, April 5, 2026
spot_img

ಜನರ ವಿಶ್ವಾಸವೇ ನನಗೆ ದೊಡ್ಡ ಗೌರವ: ಹಾವೇರಿ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಸಂಸದ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾವೇರಿ ವಿಶ್ವವಿದ್ಯಾಲಯವು ನೀಡಲು ನಿರ್ಧರಿಸಿರುವ ಗೌರವ ಡಾಕ್ಟರೇಟ್ ಸ್ವೀಕರಿಸಲು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ.

ಏ. 6 ರಂದು ನಡೆಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯವು ಘಟಿಕೋತ್ಸವದಲ್ಲಿ ಸಮಾಜ ಸೇವೆ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ, ಸಾಹಿತ್ಯ ಕ್ಷೇತ್ರದಿಂದ ಸತೀಶ ಕುಲಕರ್ಣಿ ಮತ್ತು ಶೈಕ್ಷಣಿಕ ಕ್ಷೇತ್ರದಿಂದ ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ನೀಡಲು ವಿವಿ ಸಿಂಡಿಕೇಟ್ ಸಭೆ ನಿರ್ಧರಿಸಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ನನಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದ್ದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಕೃತಜ್ಞತೆಗಳು. ಆದರೆ ನಾನು ಈಗಾಗಲೇ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಯಾವುದೇ ಅಪೇಕ್ಷವಿಲ್ಲದೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿದ್ದು, ಇಲ್ಲಿ ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಹಾಗಾಗಿ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಪುನರುಚ್ಚರಿಸುತ್ತೇನೆ ಎಂದು ಹೇಳಿದ್ದಾರೆ.

ಯಾವುದಾದರೂ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದವರಿಗೆ ಗೌರವ ಡಾಕ್ಟರೇಟ್ ನೀಡಬೇಕಾದ ಗೌರವ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ಅಭಿಪ್ರಾಯ ಎಂದು ಬೊಮ್ಮಾಯಿ ಅಭಿಪ್ರಾಯಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !