ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಮಾಡಲಾಗಿದ್ದು, ಈ ಆಯ್ಕೆ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರು ಸಂಸತ್ ಪ್ರವೇಶಿಸಿರುವ ವಿಡಿಯೊವನ್ನು ಪ್ರಿ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಅವರು, ‘ಜನಪರವಾದ ಧ್ವನಿ ಮತ್ತೆ ಸಂಸತ್ನಲ್ಲಿ ಪ್ರತಿಧ್ವನಿಸಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.
‘ಜನರ ಸಮಸ್ಯೆಗಳನ್ನು ಪ್ರತಿನಿಧಿಸುವ ಧ್ವನಿ ಸಂಸತ್ನಲ್ಲಿ ಮತ್ತೆ ಪ್ರತಿಧ್ವನಿಸಲಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಹೆಗಲಿಗೆ ಹೆಗಲು ಕೊಟ್ಟು ಹೋರಾಟ ಮಾಡಿದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳು. ಸತ್ಯ ಮತ್ತು ನ್ಯಾಯದ ಪರ ನಿಂತ ಜನತೆಗೂ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.
ಗೌತಮ ಬುದ್ಧರ ಮಾತನ್ನು ಉಲ್ಲೇಖಿಸಿ “ಮೂರು ವಿಷಯಗಳನ್ನು ದೀರ್ಘಕಾಲ ಮರೆಮಾಡಲು ಸಾಧ್ಯವಿಲ್ಲ: ಸೂರ್ಯ, ಚಂದ್ರ ಮತ್ತು ಸತ್ಯ” ಎಂದು ಟ್ವೀಟ್ ಮಾಡಿದ್ದಾರೆ.