ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಂಭವಿಸಿದ ಸುಗಂಧದ್ರವ್ಯ ಫ್ಯಾಕ್ಟರಿ(perfume factory) ಯಲ್ಲಿ ಸ್ಫೋಟದಿಂದ ಮೂವರು ಸಾವನ್ನಪ್ಪಿದ್ದು, ಈ ಸಂಬಂಧ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್(G Parameshwara) ಘೋಷಿಸಿದ್ದಾರೆ.
ಭಾನುವಾರ ಯಶವಂತಪುರದಲ್ಲಿ ಸುಗಂಧ ದ್ರವ್ಯ ತಯಾರಿಕೆಯಲ್ಲಿ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ಡಬ್ಬಗಳಲ್ಲಿ ತುಂಬಿಡಲಾಗಿತ್ತು. ಇದೇ ಡಬ್ಬ ಸೋರಿಕೆಯಾಗಿ ಘಟನೆ ಸಂಭವಿಸಿತ್ತು.