ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಪೀರಿಯೆಡ್ ಲೀವ್’ ಕುರಿತಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿಕೆಗೆ ಬಾಲಿವುಡ್ ನಟಿ ಕಂಗನಾ ರಣಾವತ್ ಬೆಂಬಲ ಸೂಚಿಸಿದ್ದಾರೆ.
ತಮ್ಮ ಇನ್ಸ್ಟಾದಲ್ಲಿ ಸ್ಮೃತಿ ಹೇಳಿಕೆಯನ್ನು ಹಾಕಿಕೊಂಡಿರುವ ನಟಿ, ವ್ಯವಸಾಯದಿಂದ ಹಿಡಿದು ಮನೆ ಕೆಲಸ, ಮಕ್ಕಳನ್ನು ಬೆಳೆಸುವವರೆಗೆ ಪ್ರತಿ ದಿನ ಮಹಿಳೆ ಕೆಲಸ ಮಾಡುತ್ತಲೇ ಇರುತ್ತಾರೆ. ಕುಟುಂಬ ಸಮುದಾಯ ಅಥವಾ ರಾಷ್ಟ್ರದ ಮೇಲಿನ ಅವರ ಬದ್ಧತೆಗೆ ಯಾವ ವಿಚಾರಗಳು ಅಡ್ಡಿಯಾಗುವುದಿಲ್ಲ. ಹೀಗಾಗಿ ಪೀರಿಯೆಡ್ ಸಮಯದಲ್ಲಿ ಮಹಿಳೆಯರಿಗೆ ರಜೆಯ ಅವಶ್ಯಕತೆ ಇಲ್ಲ. ಇದು ಋತುಚಕ್ರವೇ ಹೊರತು ರೋಗ ಅಥವಾ ಅಂಗವಿಕಲತೆ ಅಲ್ಲ ಎಂಬುದನ್ನು ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ