ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವ: ಭಾರತ ಪರ ಭೂತಾನ್ ಬ್ಯಾಟಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವಕ್ಕೆ ಭಾರತ ಪರ ಭೂತಾನ್ ಕೂಡ ಬೆಂಬಲ ಘೋಷಣೆ ಮಾಡಿದೆ.

ಆರ್ಥಿಕ ಪಗ್ರತಿಯಲ್ಲಿ ಗಮನಾರ್ಹ ಸಾಧನೆ ತೋರುತ್ತಿರುವ ಮತ್ತು ಜಾಗತಿಕ ನಾಯಕತ್ವ ವಹಿಸುತ್ತಿರುವ ಭಾರತವು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಪಡೆಯಲು ಅರ್ಹವಾಗಿದೆ ಎಂದು ಭೂತಾನ್ ಪ್ರಧಾನಿ ಶೆರಿಂಗ್‌ ಟೊಬಗೆ ಹೇಳಿದ್ದಾರೆ.

ವಿಶ್ವಸಂಸ್ಥೆಯ ಮಹಾ ಅಧಿವೇಶನದ 79ನೇ ಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ತೀರಾ ಹಿಂದುಳಿದ ದೇಶಗಳ (ಎಲ್‌ಡಿಸಿ) ಕೆಟಗರಿಯಿಂದ ಪ್ರಗತಿಯತ್ತ ಮುನ್ನಡೆಯಲು ಭೂತಾನ್‌ಗೆ ಭಾರತ ನೀಡಿದ ನೆರವು ಮತ್ತು ಸ್ನೇಹಕ್ಕಾಗಿ, ಟೊಬಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ವಿಶ್ವಸಂಸ್ಥೆಯು ಪ್ರಸ್ತುತ ಜಗತ್ತಿನ ವಾಸ್ತವಿಕ ಅಂಶಗಳನ್ನು ಪೂರೈಸುವಂತಿರಬೇಕು. ಭದ್ರತಾ ಮಂಡಳಿಯು ಗತಕಾಲದ ಅವೇಶಷವಾಗಿ ಉಳಿದಿದೆ. ಸದ್ಯದ ಭೌಗೋಳಿಕ ರಾಜಕೀಯ, ಆರ್ಥಿಕ ಚಿತ್ರಣ ಮತ್ತು ಸಾಮಾಜಿಕ ವಾಸ್ತವಾಂಶಗಳನ್ನು ಪ್ರತಿನಿಧಿಸುವಂತಹ ಮಂಡಳಿಯ ಅಗತ್ಯವಿದೆಎಂದು ಪ್ರತಿಪಾದಿಸಿದ್ದಾರೆ.

ಅಂತೆಯೇ ಹೆಚ್ಚು ಪರಿಣಾಮಕಾರಿಯನ್ನಾಗಿಸುವ ನಿಟ್ಟಿನಲ್ಲಿ 15 ರಾಷ್ಟ್ರಗಳನ್ನೊಳಗೊಂಡ ಭದ್ರತಾ ಮಂಡಳಿಯ ಸುಧಾರಣೆ ಹಾಗೂ ಭಾರತಕ್ಕೆ ಖಾಯಂ ಸದಸ್ಯತ್ವಕ್ಕಾಗಿ ಭೂತಾನ್‌ ಬಹುದಿನಗಳಿಂದ ಒತ್ತಾಯಿಸುತ್ತಿದೆ. ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾಷ್ಟ್ರಗಳಾದ ಫ್ರಾನ್ಸ್‌, ಬ್ರಿಟನ್‌, ಅಮೆರಿಕ ಸಹ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳ ಸಭೆಯಲ್ಲಿ ಭಾರತದ ಪರ ಧ್ವನಿ ಎತ್ತಿವೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!