5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ (School Board Exam) ಕರ್ನಾಟಕ ಹೈಕೋರ್ಟ್ (Karnataka High Court Division bench)​ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಹೈಕೋರ್ಟ್​ನ ಏಕಸದಸ್ಯ ಪೀಠದ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆಹಿಡಿದಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ನಡೆಯಲಿವೆ.

​2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು. ಇದರಿಂದ ಸರ್ಕಾರ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.ಇದೀಗ ವಿಭಾಗೀಯ ಪೀಠ ಸರ್ಕಾರದ ಸುತ್ತೋಲೆಯನ್ನು ಎತ್ತಿಹಿಡಿದಿದೆ. ಬೋರ್ಡ್ ಪರೀಕ್ಷೆಗೆ ಅನುಮತಿ ನೀಡುವ ಮೂಲಕ ಏಕಸದಸ್ಯ ನೀಡಿದ ಆದೇಶಕ್ಕೆ ತಡೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!