ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯನವರ ವಿಚಾರಣೆ ಹಿನ್ನಲೆಯಲ್ಲಿ ಸೋಮವಾರ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಇದೊಂದು ದೊಡ್ಡ ಪಿತೂರಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನಲೆಯಲ್ಲಿ ರಾಜ್ಯಪಾಲರ ಕ್ರಮ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ.