ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ಪ್ರಕರಣದ ವಿಚಾರಣೆಗೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಸಿಎಂ ಸಿದ್ದರಾಮಯ್ಯಗೆ ಸಮಸ್ಯೆ ಸೃಷ್ಟಿಸಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ನಂತರ ಕಾನೂನು ಸಲಹೆಗಾರ ಪೊನ್ನಣ್ಣ ಜೊತೆ ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 5 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಿದ್ದರಾಮಯ್ಯ ಸಂಪುಟ ಸಭೆ ಕರೆದಿರುವುದನ್ನು ಸಚಿವರು ಖಚಿತಪಡಿಸಿದ್ದಾರೆ.
ಸಂಜೆ ಸಿಎಂ ಸಿದ್ದರಾಮಯ್ಯ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿಗೆ ಬುಲಾವ್ ಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಹೇಳಿದ್ದಾರೆ.
ಹಾಗಾಗಿ ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರುದ್ಧ ಸರ್ಕಾರದ ನಿರ್ಧಾರ ಸಂಜೆ ವೇಳೆಗೆ ತಿಳಿಯಲಿದೆ.