ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ (Food minister KH Muniyappa) ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಹೊಸದಾಗಿ BPL, APL ಕಾರ್ಡ್ಗೆ ಅರ್ಜಿ (application) ಸಲ್ಲಿಸಬಹುದು. ನೀತಿಸಂಹಿತೆ ಜಾರಿ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಸ್ಥಗಿತವಾಗಿತ್ತು. ಈಗ ಹೊಸ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪಡಿತರ ಕಾರ್ಡ್ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೂ ಅವಕಾಶವಿದೆ. ಕಾರ್ಡ್ನಲ್ಲಿರುವ ಮೃತರ ಹೆಸರನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.
ಅನ್ನಭಾಗ್ಯ (Anna Bhagya) ಯೋಜನೆಯಡಿ 5 ಕೆಜಿ ಅಕ್ಕಿ ಜೊತೆ ಹಣ ಜಮೆಯಾಗುತ್ತಿದೆ. ಈವರೆಗೆ ಒಂದು ಕೋಟಿ ಕುಟುಂಬಕ್ಕೆ ಹಣ ಹಾಕಲಾಗಿದೆ. ಇಲಾಖೆಯಿಂದ ಸುಮಾರು 556 ಕೋಟಿ ಹಣ ಹಾಕಲಾಗಿದೆ. ರಾಗಿ, ಜೋಳಕ್ಕೆ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಚಿವರಿಗೆ ಮನವಿ ಮಾಡಿಕೊಂಡಿದ್ದೇವೆ ಎಂದು ವಿವರಿಸಿದ್ದಾರೆ.
ಆಂಧ್ರ ಹಾಗೂ ತೆಲಂಗಾಣ ಸರ್ಕಾರ ಅಕ್ಕಿ ನೀಡಲು ಮುಂದಾಗಿವೆ . ₹ 34 ದರದಲ್ಲಿ ನೀಡಿದರೆ ಅಕ್ಕಿ ಖರೀದಿ ಮಾಡಲು ಸಿದ್ಧವಿದ್ದೇವೆ. ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡುತ್ತೇವೆ. 1 ವಾರದಲ್ಲಿ ಅಲ್ಲಿನ ಅಧಿಕಾರಿಗಳು ನಿರ್ಧಾರ ಪ್ರಕಟಿಸುವ ವಿಶ್ವಾಸವಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ 10 ಕೆಜಿ ಅಕ್ಕಿ ವಿತರಿಸುವ ಚಿಂತನೆ ಇದೆ ಎಂದರು.