ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಇರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ 13 ಭಾಷೆಗಳಲ್ಲಿ ಬರೆಯಲು ಅನುಮತಿ ನೀಡಲಾಗಿದೆ.
ಈ ಕುರಿತಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದು, ‘ಪ್ರಸಕ್ತ ಸಾಲಿನ ನೀಟ್ ನ್ನು ಕನ್ನಡ, ಪಂಜಾಬ್, ಮಲಯಾಳಂ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿರುವ ಭಾರತೀಯ ವಿದ್ಯಾರ್ಥಿ ಸಮುದಾಯಕ್ಕೆ ನೆರವಾಗುವಂತೆ ಕುವೈತ್ನಲ್ಲೂ ನೀಟ್ ಪರೀಕ್ಷಾ ಕೇಂದ್ರ ತೆರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಿಂದಿ, ಪಂಜಾಬಿ, ಅಸ್ಸಾಮಿ, ಬಂಗಾಲಿ, ಒಡಿಯಾ, ಗುಜರಾತಿ, ಮರಾಠಿ, ತೆಲುಗು, ಮಲೆಯಾಳಂ, ಕನ್ನಡ, ತಮಿಳು, ಉರ್ದು ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದೆ. ಹಾಗೆಯೇ ಪರೀಕ್ಷಾ ಕೇಂದ್ರಗಳನ್ನೂ ಸಹ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ನೀಟ್ (ಯುಜಿ) 2021 ರ ನೋಂದಣಿ ಮಂಗಳವಾರ ಸಂಜೆ 5:00 ರಿಂದ http://ntaneet.nic.in ನಲ್ಲಿ ಪ್ರಾರಂಭವಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಅವರು ನಿನ್ನೆ ಟ್ವೀಟ್ ಮೂಲಕ NEET ಸ್ನಾತಕೋತ್ತರ ಪರೀಕ್ಷೆಯನ್ನ ಸೆಪ್ಟೆಂಬರ್ 11, 2021 ರಂದು ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದ್ದರು.