ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಬೆಳಗಾವಿ:
ಜಿಲ್ಲೆಯ ಗೋಕಾಕ ನಗರದಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ನಗರದ ಹೊರವಲಯ ಮಹಾಂತೇಶ ನಗರದಲ್ಲಿ ಘಟನೆ ನಡೆದಿದ್ದು, ಮಂಜು ಶಂಕರ ಮುರಕಿಭಾವಿ (22) ಕೊಲೆಯಾದ ಯುವಕ.
ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ತಡರಾತ್ರಿ ಮಾರಕಾಸ್ತ್ರ ಗಳಿಂದ ದುಷ್ಕರ್ಮಿಗಳು ಕೊಲೆ ಮಾಡಿ, ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಗೋಕಾಕ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.