ವೀಡಿಯೋ ಮಾಡಿ ವಿಷ ಸೇವಿಸಿದ್ದಾತ ಮೃತ್ಯು

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ವೀಡಿಯೋ ಮಾಡಿ ನಂತರ ವಿಷ ಸೇವಿಸಿದ್ದ ಮಾಡಾವು ಕಟ್ಟತ್ತಾರು ನಿವಾಸಿ ನಾಸಿರ್ ಭಾನುವಾರ ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮಂಗಳವಾರದಂದು ಅವರು ವಿಷ ಸೇವಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೀವನ್ಮರಣ ಸ್ಥಿತಿಯಲ್ಲಿದ್ದ ಅವರು ಇದೀಗ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ನಾಸಿರ್ ಚಾಲಕ ವೃತ್ತಿ ಮಾಡುತ್ತಿದ್ದು, ಮಾಲಕರು ತನಗೆ ಹಲ್ಲೆ ನಡೆಸಿದ್ದಾರೆ. ಆದ್ದರಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋದಲ್ಲಿ ಹೇಳಿಕೊಂಡಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಮೃತರ ದಫನ ಕಾರ್ಯ ಅಜ್ಜಿ ಕಟ್ಟೆ ಮಸೀದಿಯ ದಫನಭೂಮಿಯಲ್ಲಿ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!