Monday, July 4, 2022

Latest Posts

ನೀವು ಕೊರೋನಾ ಲಸಿಕೆ ಪಡೆದಿದ್ದೀರಾ? ಪ್ರಮಾಣ ಪತ್ರದಲ್ಲಿ ವೈಯಕ್ತಿಕ ಮಾಹಿತಿ ತಪ್ಪಾಗಿದ್ರೆ ಈ ವಿಧಾನದಲ್ಲಿ ಸರಿ ಮಾಡಿಕೊಳ್ಳಿ…

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ಆನ್ ಡೆಸ್ಕ್:

ಕೋವಿಡ್ ವಾಕ್ಸಿನ್ ಪಡದ ನಂತರ ನೀಡಲಾಗುವ ಪ್ರಮಾಣಪತ್ರದಲ್ಲಿ ಇರುವ ವೈಯಕ್ತಿಕ ವಿವರವನ್ನು ತಿದ್ದುಪಡಿ ಮಾಡಿಕೊಳ್ಳಲು ಇದೀಗ  ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ.

ಹೌದು.. ನೀವು ಲಸಿಕೆ ಪಡೆದು, ಕೊರೋನಾ ಲಸಿಕೆಯ ಪ್ರಮಾಣ ಪತ್ರದಲ್ಲಿ ಏನಾದ್ರೂ ವೈಯಕ್ತಿಕ ವಿವರಗಳ ತಪ್ಪುಗಳು ಆಗಿದ್ದಲ್ಲಿ, ಕೋವಿನ್ ವೆಬ್ ಸೈಟ್ ಗೆ ಭೇಟಿ ನೀಡಿ, ಆ ತಪ್ಪುಗಳನ್ನು ತಿದ್ದುಪಡಿ ಮಾಡಬಹುದಾಗಿದೆ.

ಈ ಬಗ್ಗೆ ಆರೋಗ್ಯ ಸೇತು ಆ್ಯಪ್ ನ ಟ್ವಿಟರ್‌ ಖಾತೆಯಲ್ಲಿ ತಿಳಿಸಲಾಗಿದ್ದು, ಲಸಿಕೆ ಪ್ರಮಾಣ ಪತ್ರದಲ್ಲಿ ಹೆಸರು, ಜನ್ಮದಿನಾಂಕ, ಲಿಂಗ ಸೇರಿದಂತೆ ಇತರ ವಿವರಗಳು ತಪ್ಪಾಗಿದ್ದರೇ ಆ ವಿವರಗಳನ್ನು ನೀವೇ ತಿದ್ದುಪಡಿ ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದೆ

‘ಕೋವಿನ್‌’ ಪೋರ್ಟಲ್‌ನಲ್ಲಿ ನೋಂದಣಿ ಸಮಯದಲ್ಲಿ ನೀಡಿರುವ ಮೊಬೈಲ್‌ ಸಂಖ್ಯೆಯನ್ನು ಬಳಸಿ ಲಸಿಕೆಯ ಎಷ್ಟನೇ ಡೋಸ್‌ ಪಡೆಯಲಾಗಿದೆ ಎಂಬ ವಿವರವನ್ನು ಸಹ ಅಪ್‌ಡೇಟ್‌ ಮಾಡಬಹುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss