ಪೆರುವಿನಲ್ಲಿ ಹಿಂಸಾತ್ಮಕ ಪ್ರತಿಭಟನೆ: 17 ಮಂದಿ ಸಾವು, ರಾತ್ರಿ ಕರ್ಫ್ಯೂ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪೆರುವಿನಲ್ಲಿ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದು, ಘರ್ಷಣೆಯಲ್ಲಿ 17 ಜನರು ಸಾವನ್ನಪ್ಪಿದ್ದಾರೆ. ಪರಿಣಾಮವಾಗಿ ಪೆರುವಿನ ಪ್ರಧಾನಿ ಅಲ್ಬರ್ಟೊ ಒಟಾರೊಲಾ ಅವರು ಮೂರು ದಿನಗಳ ಕಾಲ ರಾತ್ರಿ ಕರ್ಫ್ಯೂ ವಿಧಿಸಿದ್ದಾರೆ. ಈ ಕರ್ಫ್ಯೂ ಪೆರು ಸಮಯದ ಪ್ರಕಾರ ಮೂರು ದಿನಗಳ ಕಾಲ ರಾತ್ರಿ 8 ರಿಂದ ಬೆಳಿಗ್ಗೆ 4 ರವರೆಗೆ ಇರುತ್ತದೆ.

ಪ್ರತಿಭಟನಕಾರರು ದೇಶದಲ್ಲಿ ಅವಧಿಪೂರ್ವ ಚುನಾವಣೆಗಳು ಮತ್ತು ಮಾಜಿ ಅಧ್ಯಕ್ಷ ಪೆಡ್ರೊ ಕ್ಯಾಸ್ಟಿಲ್ಲೊ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಜೂಲಿಯಾಕಾ ನಗರದಲ್ಲಿ ಘರ್ಷಣೆಗಳು ಭುಗಿಲೆದ್ದು ಇದರಲ್ಲಿ 68 ಮಂದಿ ಗಾಯಗೊಂಡಿದ್ದಾರೆ. ಕಳೆದ ಡಿಸೆಂಬರ್‌ನಿಂದ ಪೆರುವಿನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಇದರ ಪರಿಣಾಮವಾಗಿ, ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಇದುವರೆಗೂ ಒಟ್ಟು 39 ಜನರು ಸಾವನ್ನಪ್ಪಿದ್ದಾರೆ. ಹಲವು ಪ್ರದೇಶಗಳಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿವೆ. ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಸಂಚಾರ ಸೇರಿದಂತೆ ಯಾವುದೇ ಕೆಲಸ ಕಾರ್ಯ ನಡೆಯದಂತೆ ಅಡ್ಡಿಯುಂಟು ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!