Monday, November 10, 2025

ಜಾತಿಗಣತಿ ಸಮೀಕ್ಷೆ ಪ್ರಶ್ನಿಸಿ ಅರ್ಜಿ: ನಾಳೆ ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ನಾಳೆ ಮಧ್ಯಾಹ್ನ 2.30ಕ್ಕೆ ಜಾತಿಗಣತಿ ಕುರಿತಂತೆ ತಡೆಯಾಜ್ಞೆ ನೀಡುವ ಸಂಬಂಧದ ಅರ್ಜಿಯ ವಿಚಾರಣೆ ಮುಂದೂಡಿದೆ.

ಇಂದು ಜಾತಿಗಣತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ್ ನಾದವಗಿ ವಾದ ಮಂಡಿಸಿದರು.

ಈ ವಾದ ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಪೀಠವು ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಿಗದಿ ಪಡಿಸಿ, ವಿಚಾರಣೆಯನ್ನು ಮುಂದೂಡಿದೆ.

error: Content is protected !!