ಸಾಕ್ಷ್ಯಚಿತ್ರ ನಿಷೇಧ ಪ್ರಶ್ನಿಸಿ ಅರ್ಜಿ: ಕೋರ್ಟ್‌ ಸಮಯ ವ್ಯರ್ಥ ಎಂದ ಕಿರಣ್‌ ರಿಜಿಜು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪ್ರಧಾನಿ ನರೇಂದ್ರ ಮೋದಿ ( Narendra Modi) ಕುರಿತು ಬಿಬಿಸಿಯ ಇಂಡಿಯಾ: ದಿ ಮೋದಿ ಕ್ವಶ್ಚನ್‌ (India: The Modi Question) ಡಾಕ್ಯುಮೆಂಟರಿಯನ್ನು (BBC Documentary) ಭಾರತದಲ್ಲಿ ನಿಷೇಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದಕ್ಕೆ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಖಂಡಿಸಿದ್ದಾರೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ವಕೀಲ ಪ್ರಶಾಂತ್‌ ಭೂಷಣ್‌ ಸೇರಿ ಹಲವರು ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇದಕ್ಕೆ ಖಂಡನೆ ವ್ಯಕ್ತಪಡಿಸಿದ ರಿಜಿಜು, ದೇಶದ ಸಾಮಾನ್ಯ ಜನ ನ್ಯಾಯಕ್ಕಾಗಿ ಕಾಯುತ್ತಿದ್ದರೆ, ಇಂತಹ ಅರ್ಜಿಗಳನ್ನು ಸಲ್ಲಿಸಿ ಸುಪ್ರೀಂ ಕೋರ್ಟ್‌ನ ಅಮೂಲ್ಯ ಸಮಯ ಹಾಳು ಮಾಡಲಾಗುತ್ತಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ನಿಷೇಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಹಾಗೂ ಜೆ ಬಿ ಪರ್ದಿವಾಲಾ ಅವರಿದ್ದ ಪೀಠವು ಸಮ್ಮತಿ ಸೂಚಿಸಿದೆ. ಫೆಬ್ರವರಿ 6ರಂದು ವಿಚಾರಣೆ ಮಾಡಲಾಗುವುದು ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!