ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮ ನಡೆಸಲು ಅನುಮತಿ ಕಡ್ಡಾಯಕ್ಕೆ ಇತ್ತೀಚೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ ಆದೇಶವನ್ನು ಕಾಯ್ದಿರಿಸಿದೆ.
ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ತೆರವುಗೊಳಿಸುವಂತೆ ರಾಜ್ಯ ಸರ್ಕಾರವು ದ್ವಿದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಮತ್ತು ಗೀತಾ ಕೆ.ಬಿ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಿ ,ವಾದ ಪ್ರತಿವಾದ ಅಲಿಸಿ ಬಳಿಕ ತೀರ್ಪು ಕಾಯ್ದಿರಿಸಿ ಪೀಠ ಆದೇಶಿಸಿದೆ.

