ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ತಿದ್ದುಪಡಿ ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ಪರಿಗಣಿಸಲಾಗುವುದು ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ.
ವಕ್ಫ್ ತಿದ್ದುಪಡಿ ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ದೆಹಲಿಯ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರು ಸುಪ್ರೀಂಗೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠದ ಎದುರು ಅರ್ಜಿದಾರರ ಪರ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಎ.ಎಂ. ಸಿಂಘ್ವಿವಾದ ಮಂಡಿಸಿದರು. ತುರ್ತು ವಿಚಾರಣೆ ನಡೆಸುವಂತೆ ಕೋರಿದರು.
ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ಪೀಠ, ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿತು.
ಮಹತ್ವದ ಮಸೂದೆಗೆ ಏಪ್ರಿಲ್ 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದರು.