ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಡೆಸಬೇಕಾಗಿದ್ದ ರ್ಯಾಲಿಗೆ ಸಂಬಂಧಪಟ್ಟಂತೆ ಸಲ್ಲಿಸಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.
ಈ ಮೂಲಕ ನಾಳೆ ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ ಪ್ರಧಾನಿ ಮೋದಿಯವರ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ವಕೀಲ ಎನ್ ಪಿ ಅಮೃತೇಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ವಿಜಯ್ಕುಮಾರ್ ಎಸ್.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿತು.