ಸ್ಯಾಂಕಿ ಟ್ಯಾಂಕ್​​ನಲ್ಲಿ ‘ಕಾವೇರಿ ಆರತಿ’ ಆಯೋಜನೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್​ನ ಬಫರ್ ಝೋನ್​ನಲ್ಲಿ ರಾಜ್ಯ ಸರ್ಕಾರ ಮಾರ್ಚ್ 21ರಂದು ಗಂಗಾರತಿ ಮಾದರಿಯಲ್ಲಿ ಹಮ್ಮಿಕೊಂಡ ಕಾವೇರಿ ಆರತಿ ಕಾರ್ಯಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ.

ನಗರದ ಕೆರೆಗಳ ಸಂರಕ್ಷಣೆ ಮತ್ತು ಕುರಿತಂತೆ ಗೀತಾ ಮಿಶ್ರಾ ಎಂಬವರು 2019ರಲ್ಲಿ ಸಲ್ಲಿಸಿರುವ ಅರ್ಜಿಯೊಂದಿಗೆ, ಮನವಿಯನ್ನು ವಿಚಾರಣೆ ನಡೆಸಬೇಕು ಎಂದು ವಕೀಲ ಜಿ.ಆರ್‌.ಮೋಹನ್‌ ವಿಷಯ ಪ್ರಸ್ತಾಪಿಸಿದರು.

ಅಲ್ಲದೆ, ಕಾವೇರಿ ಆರತಿಯ ಹಮ್ಮಿಕೊಳ್ಳುವ ಸಂಬಂಧ ಬೆಂಗಳೂರು ಜಲ ಮಂಡಳಿಯ ಅಧಿಕಾರಿಗಳು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಸಂಬಂಧ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸಂಬಂಧ ಶೀಘ್ರ ವಿಚಾರಣೆಗೆ ಪರಿಗಣಿಸಬೇಕು ಎಂದು ಮುಖ್ಯನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ನ್ಯಾಯಪೀಠಕ್ಕೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.

ವಿಚಾರಣೆ ವೇಳೆ ವಕೀಲರು, ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಹಮ್ಮಿಕೊಳ್ಳುವುದಕ್ಕೆ ಅರ್ಜಿದಾರರಿಂದ ಯಾವುದೇ ಆಕ್ಷೇಪಣೆ ಇಲ್ಲ. ಆದರೆ, ಈ ಕಾಯಕ್ರಮಕ್ಕೆ ಕೆರೆಯ ಬಫರ್‌ ಝೋನ್​ನಲ್ಲಿ ಕಾನೂನುಬಾಹಿರವಾಗಿ ತಾತ್ಕಾಲಿಕ ಸ್ಟೇಜ್​​ಗಳು ನಿರ್ಮಾಣವಾಗಲಿವೆ, ಇದಕ್ಕೆ ನಮ್ಮ ಆಕ್ಷೇಪಣೆ ಇದೆ ಎಂದು ಪೀಠಕ್ಕೆ ತಿಳಿಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!