ಹಾಸನಾಂಬಾ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ಜಿಲ್ಲಾಧಿಕಾರಿಗೆ ಮನವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹಾಸನ ಜಿಲ್ಲೆಯ ಹಾಸನಾಂಬಾ ದೇವಸ್ಥಾನವು 12ನೇ ಶತಮಾನದ ಅತ್ಯಂತ ಪ್ರಾಚೀನ ಶಕ್ತಿಪೀಠವಾಗಿದೆ. ಭಗವಾನ್ ಶಿವನ ಅವತಾರಿ ಸಪ್ತಮಾತೃಕೆಯರಾದ ವೈಷ್ಣವಿ, ಮಾಹೇಶ್ವರಿ ಮತ್ತು ಕೌಮಾರಿ ದೇವಿಗಳ ವಾಸಸ್ಥಾನವಾಗಿದೆ. ಈ ಪವಿತ್ರ ಶ್ರೀ ದೇವಿಯರ ಕ್ಷೇತ್ರಕ್ಕೆ ವರ್ಷಕ್ಕೊಮ್ಮೆ ದೀಪಾವಳಿಯ ಸಮಯದಲ್ಲಿ ಲಕ್ಷಾಂತರ ಭಕ್ತರು ದೇವಿಯರ ದರುಶನ ಪಡೆಯುತ್ತಾರೆ. ಈ ಸಂದರ್ಭ ಸ್ತ್ರೀಯರು ಸೀರೆ, ಭಾರತೀಯ ಉಡುಪು ಹಾಗೂ ಪುರುಷರು ಸಾತ್ತ್ವಿಕ ಉಡುಪು ಧರಿಸಿಕೊಂಡು ದೇವರ ದರುಶನ ಪಡೆಯಬೇಕೆಂದು ಆಗ್ರಹಿಸಿ ಶನಿವಾರ ಹಾಸನದ ಜಿಲ್ಲಾಧಿಕಾರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಸುಜಾತ ನವೀನ, ಭಾರತೀಯ ವೈದ್ಯಕೀಯ ಸಂಘ, ಹಾಸನದ ಮಾಜಿ ಅಧ್ಯಕ್ಷರಾದ ಡಾ. ಎನ್ ರಮೇಶ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!