ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಭಿಕ್ಷುಕರಿಗೂ ಲಸಿಕೆ ಹಾಗೂ ಪುನರ್ವಸತಿ ಕಲ್ಪಿಸಿಕೊಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಡಿ.ವೈ. ಚಂದ್ರಚೂಡ್ ಮತ್ತು ಎಂ.ಆರ್ ಶಾ ಅವರ ಪೀಠವು, ಶಿಕ್ಷಣ ಮತ್ತು ಉದ್ಯೋಗದ ಕೊರತೆಯಿಂದಾಗಿ ಕೆಲವರು ಭಿಕ್ಷೆಗಾಗಿ ರಸ್ತೆಗಿಳಿಯುತ್ತಾರೆ. ಇದು ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಯಾಗಿದೆ. ಹಾಗಾಗಿ ಯಾವುದೇ ಭಿಕ್ಷುಕನನ್ನು ರಸ್ತೆಗಿಳಿಯದಂತೆ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಸೋಂಕಿನ ಸಂದರ್ಭದಲ್ಲಿ ಭಿಕ್ಷುಕರು ಮತ್ತು ಅಲೆಮಾರಿಗಳಿಗಾಗಿ ವಸತಿ, ಆಹಾರವನ್ನು ಒದಗಿಸಬೇಕು, ಲಸಿಕೆಯನ್ನು ನೀಡಬೇಕು ಎಂದು ಕೋರಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.ಈ ವಿಷಯದಲ್ಲಿ ಏನು ಮಾಡಬಹುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲಹೆ ನೀಡಿಬಹುದು ಎಂದ ಪೀಠವು, ಈ ಬಗ್ಗೆ ಎರಡು ವಾರಗಳೊಳಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.