ದೆಹಲಿ ವಾಯು ಮಾಲಿನ್ಯ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ: ಪಂಜಾಬ್, ಹರಿಯಾಣ, ಯುಪಿ ಮತ್ತು ದೆಹಲಿಯ ಸಿಎಸ್‌ಗಳಿಗೆ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯಲ್ಲಿ ವಾಯು ಮಾಲಿನ್ಯದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಪಂಜಾಬ್ ಮತ್ತು ಹರಿಯಾಣದಲ್ಲಿ ಬೆಳೆ ತ್ಯಾಜ್ಯವನ್ನು ಸುಡುವುದನ್ನು ನಿಲ್ಲಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.  ಸುಪ್ರೀಂ ಕೋರ್ಟ್ ಇದೇ ತಿಂಗಳ 10 ರಂದು ಈ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ (ಎನ್‌ಎಚ್‌ಆರ್‌ಸಿ) ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಪ್ರತಿಕ್ರಿಯೆ ನೀಡಿದ್ದು, ಪಂಜಾಬ್, ಹರಿಯಾಣ, ಯುಪಿ ಮತ್ತು ದೆಹಲಿ ಸಿಎಸ್‌ಗಳಿಗೆ ನೋಟಿಸ್ ನೀಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅಪಾಯದ ಗಂಟೆ ಬಾರಿಸುತ್ತಿದೆ. ದಿನದಿಂದ ದಿನಕ್ಕೆ ಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದ್ದು, ಅಪಾಯಕಾರಿ ಮಟ್ಟ ತಲುಪುತ್ತಿದೆ. ದೆಹಲಿ ಪಕ್ಕದ ರಾಜ್ಯಗಳಾದ ಪಂಜಾಬ್, ಹರಿಯಾಣ ಮತ್ತು ಯುಪಿ ರೈತರು ಬೆಳೆ ತ್ಯಾಜ್ಯವನ್ನು ಸುಡುತ್ತಿರುವುದರಿಂದ ದೆಹಲಿಯಲ್ಲಿ ದಟ್ಟ ಹೊಗೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ನಾಳೆಯಿಂದ ಶಾಲೆಗಳಿಗೆ ರಜೆ ಘೋಷಿಸಿದ್ದು, ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ಆದೇಶಿಸಲಾಗಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಗಳನ್ನು ಪೀಠವು ತೀವ್ರವಾಗಿ ತನಿಖೆ ನಡೆಸುತ್ತಿದೆ. ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ನ್ಯಾಯಮಂಡಳಿ ಆದೇಶ ಹೊರಡಿಸುತ್ತಿದ್ದರೂ ಫಲಿತಾಂಶ ಆಶಾದಾಯಕವಾಗಿಲ್ಲ. ಚಳಿಗಾಲ ಬಂತೆಂದರೆ ಸಾಕು ದೆಹಲಿಯನ್ನು ಮಾಲಿನ್ಯ ತಿನ್ನುತ್ತಿದೆ. ಇದರಿಂದ ನಗರವಾಸಿಗಳು ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ. ಹಿಂದಿನ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್.ವಿ.ರಮಣ ಅವರು ದೆಹಲಿಯ ವಾಯುಮಾಲಿನ್ಯದ ಬಗ್ಗೆ ಕಟುವಾದ ಹೇಳಿಕೆಗಳನ್ನು ನೀಡಿದ್ದರು. ತ್ಯಾಜ್ಯ ಸುಡುವುದನ್ನು ತಡೆಯಲು ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳು ಯಾವ ಕ್ರಮಗಳನ್ನು ಕೈಗೊಂಡಿವೆ ಎಂದು ಸುಪ್ರೀಂ ಕೋರ್ಟ್ ಕೇಳಿತ್ತು. ಏನು ಮಾಡಿದರೂ ಬೆಳೆ ತ್ಯಾಜ್ಯ ಸುಡುವುದು ನಿಲ್ಲುತ್ತಿಲ್ಲ, ದೆಹಲಿಯಲ್ಲಿ ವಾಯು ಮಾಲಿನ್ಯ ಕಡಿಮೆಯಾಗುತ್ತಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!