ನೂತನ ಸಂಸತ್ ಭವನ ರಾಷ್ಟ್ರಪತಿಯಿಂದ ಉದ್ಘಾಟನೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೊಸ ಸಂಸತ್ತಿನ ಉದ್ಘಾಟನೆ ಬಗ್ಗೆ ವಿಪಕ್ಷಗಳು ಟೀಕೆ ಮಾಡುತ್ತಿವೆ. ನೂತನ ಕಟ್ಟಡ ಆರಂಭಿಸಲು ಕೇಂದ್ರ ಸರ್ಕಾರ ಅವಕಾಶ ನೀಡದೆ ರಾಷ್ಟ್ರಪತಿಗಳಿಗೆ ಅವಮಾನ ಮಾಡುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದಾರೆ. ಪ್ರಧಾನಿಯವರು ಸಂಸತ್‌ ಭವನ ಉದ್ಘಾಟನೆಯನ್ನು ವಿರೋಧಿಸಿ ಕಾರ್ಯಕ್ರಮವನ್ನು ಬಹಿಷ್ಕರಿಸಿದಾರೆ. 19 ವಿರೋಧ ಪಕ್ಷಗಳು ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಘೋಷಿಸಿವೆ.

ನೂತನ ಸಂಸತ್ ಭವನದ ಉದ್ಘಾಟನೆ ಪಂಚಾಯ್ತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಭಾರತದ ರಾಷ್ಟ್ರಪತಿಗಳಿಂದ ನೂತನ ಸಂಸತ್ ಭವನ ಉದ್ಘಾಟನೆಗೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಸಿಆರ್ ಜಯ ಸುಕಿನ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಾಳೆ ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ. ವಕೀಲರಾದ ಜಯಾ ಸುಕಿನ್ ಅವರು ಲೋಕಸಭೆಯ ಪ್ರಧಾನ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಕಾನೂನು ಕಾರ್ಯದರ್ಶಿಗಳನ್ನು ಈ ಅರ್ಜಿಯಲ್ಲಿ ಪ್ರತಿವಾದಿಗಳಾಗಿ ಸೇರಿಸಿದ್ದಾರೆ.

ಮೇ 18 ರಂದು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಅವರು ಹೊರಡಿಸಿದ ಆಹ್ವಾನಗಳು ಪ್ರೋಟೋಕಾಲ್ ಅನ್ನು ಅನುಸರಿಸಿಲ್ಲ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದು ಅರ್ಜಿದಾರ ಜಯ ಸುಕಿನ್ ಅವರು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ. ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮವು ಕಾನೂನುಬಾಹಿರ, ಅನಿಯಂತ್ರಿತ ಮತ್ತು ಅನ್ಯಾಯ, ಅಧಿಕಾರ ದುರುಪಯೋಗ ಮತ್ತು ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ದಾಖಲೆಗಳನ್ನು ಸರಿಯಾಗಿ ಪರಿಶೀಲಿಸದೆ, ಭಾರತದ ಸಂವಿಧಾನ ಮತ್ತು ಜನರ ಅಭಿಪ್ರಾಯವನ್ನು ತಿಳಿಯದೆ ಮನಸೋ ಇಚ್ಛೆ ಉದ್ಘಾಟನೆ ಮಾಡಲು ಸಿದ್ದತೆ ಮಾಡಿದ್ದಾರೆ. ಸಂವಿಧಾನದ 21, 79, 87 ಕಲಂಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಹೇಳಲಾಗಿದೆ. ನೂತನ ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ಕೇಂದ್ರದ ನಿರ್ಧಾರ ತಾರತಮ್ಯದಿಂದ ಕೂಡಿದೆ ಎಂದ್ದು, ಕೇಂದ್ರವು ಭಾರತದ ಸಂವಿಧಾನದ 14, 16 ಮತ್ತು 21 ನೇ ವಿಧಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!