ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರೋಗ್ಯದ ಆಧಾರದ ಮೇಲೆ ಮಧ್ಯಂತರ ಜಾಮೀನನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ತುರ್ತು ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ನಿರಾಕರಿಸಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾಮೀನು ವಿಸ್ತರಣೆಗೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಹಿಂದಿನ ತೀರ್ಪಿನ ಪ್ರಕಾರ, ಅವರು ಜೂನ್ 2 ರಂದು ಜೈಲಿಗೆ ಹೋಗಬೇಕಾಗುತ್ತದೆ. ದೆಹಲಿಯ ಅಬಕಾರಿ ನೀತಿಯನ್ನು ವಂಚಿಸಿದ ಕಾರಣಕ್ಕಾಗಿ ಜೈಲು ಪಾಲಾಗಿದ್ದರು. ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಒಂದು ದಿನದ ನಂತರ ಜೂನ್ 2 ರಂದು ದೆಹಲಿ ಸಿಎಂ ತಿಹಾರ್ ಜೈಲಿನಲ್ಲಿ ಶರಣಾಗಲು ನಿರ್ಧರಿಸಲಾಗಿದೆ.