ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆ.29ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರು ಸುದೀರ್ಘ ಒಂದೂವರೆ ಗಂಟೆ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ವಿಚಾರಣೆಯನ್ನು ಮುಂದೂಡಿದರು.
ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಾದ ಮಂಡಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು.