ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು 6 ವರ್ಷಗಳ ವರೆಗೆ ಚುನಾವಣೆಯಿಂದ ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಚುನಾವಣಾ ಪ್ರಚಾರದ ವೇಳೆ ‘ದ್ವೇಷ ಭಾಷಣ’ ಮಾಡಿದ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮೋದಿ ಅವರನ್ನು ಚುನಾವಣೆಯಿಂದ ನಿರ್ಬಂಧಿಸಲು ಕೋರಿ ಅರ್ಜಿ ಸಲ್ಲಿಸಲಾಗಿತ್ತು.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎಸ್‌ಸಿ ಶರ್ಮಾ ಅವರ ಪೀಠವು ಅರ್ಜಿದಾರರಿಗೆ ದೂರು ಪರಿಹಾರಕ್ಕಾಗಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಲು ಹೇಳಿದೆ.
ನೀವು ಅಧಿಕಾರಿಗಳನ್ನು ಸಂಪರ್ಕಿಸಿದ್ದೀರಾ? ರಿಟ್ ಆಫ್ ಮ್ಯಾಂಡಮಸ್‌ಗಾಗಿ ನೀವು ಮೊದಲು ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಪೀಠ ತಿಳಿಸಿದೆ. ಅರ್ಜಿದಾರರು ಮನವಿಯನ್ನು ಹಿಂತೆಗೆದುಕೊಂಡರು.
ಪ್ರಜಾಪ್ರತಿನಿಧಿ ಕಾಯ್ದೆಯಡಿ ಪ್ರಧಾನಿ ಮೋದಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಿಂದ ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಆನಂದ್ ಎಸ್ ಜೊಂಧಲೆ ಮೂಲಕ ಫಾತಿಮಾ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು.