ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಂದೂ ಮತ್ತು ಸಿಖ್ ದೇವರುಗಳು ಮತ್ತು ಪೂಜಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷ ಮತ ಯಾಚಿಸಿದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.
ವಕೀಲ ಆನಂದ್ ಎಸ್ ಜೊಂಧಲೆ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸಚಿನ್ ದತ್ತಾ ನೇತೃತ್ವದ ಪೀಠ, ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಊಹಿಸಿರುವುದರಿಂದ ನಿರ್ದಿಷ್ಟ ಕ್ರಮ ಕೈಗೊಳ್ಳಲು ಆಯೋಗಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಅರ್ಜಿದಾರರು ಸೂಚಿಸಿರುವುದರಿಂದ ಅರ್ಜಿಯನ್ನು ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ ಎಂದು ಹೇಳಿದರು.
ಕೇಂದ್ರ ಚುನಾವಣಾ ಆಯೋಗದ ಪರ ವಾದ ಮಂಡಿಸಿದ ವಕೀಲ ಸಿದ್ಧಾಂತ್ ಕುಮಾರ್, ಜೊಂಧಲೆ ಅವರ ದೂರನ್ನು ಆಯೋಗವು ಕಾನೂನಿನ ಪ್ರಕಾರ ಪರಿಗಣಿಸಲಿದೆ. ಆಯೋಗವು ನಿತ್ಯವು ಇಂತಹ ದೂರುಗಳನ್ನು ಸ್ವೀಕರಿಸುತ್ತದೆ, ಪರಿಶೀಲಿಸುತ್ತದೆ ಮತ್ತು ಕ್ರಮ ತೆಗೆದುಕೊಳ್ಳುತ್ತದೆ. ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆ ಎಂದು ವಾದಿಸಿದರು.