ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಬಹುದು ಎನ್ನಲಾಗಿದೆ. ಪ್ರಕರಣದ ತನಿಖೆಯನ್ನು ಸಿಬಿಐ ತನಿಖಾಧಿಕಾರಿಗಳಿಗೆ ವಹಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
ಈ ನಡುವೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಸುಪ್ರೀಂ ಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದು, ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸ್ನೇಹಮಯಿ ಕೃಷ್ಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮುಡಾ ಹಗರಣದ ಕುರಿತು ಲೋಕಾಯುಕ್ತ ತನಿಖೆಗೆ ವಿಶೇಷ ಜನಪ್ರತಿನಿಧಿ ನ್ಯಾಯಾಲಯ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಇದೇ ವೇಳೆ ದೂರುದಾರರು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದ್ದಾರೆ.