ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮನೆ ಊಟ, ಹಾಸಿಗೆ, ಪುಸ್ತಕ ನೀಡುವಂತೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಮೊದಲು ಜೈಲಿನಲ್ಲಿ ಮನೆ ಊಟ ನೀಡುವಂತೆ ಹಾಗೂ ಬಟ್ಟೆ, ಹಾಸಿಗೆ, ಪುಸ್ತಕ ನೀಡುವಂತೆ ಕೋರಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಆದ್ರೆ ಹೈಕೋರ್ಟ್ ಪೀಠ, ಈ ಬಗ್ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಇದೀಗ ನಟ ದರ್ಶನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.